Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:9 - ಕನ್ನಡ ಸತ್ಯವೇದವು C.L. Bible (BSI)

9 ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:9
14 ತಿಳಿವುಗಳ ಹೋಲಿಕೆ  

ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಹಾಳುಮಾಡಿದ್ದ ಪಟ್ಟಣಗಳಲ್ಲೆ ಅವನು ಸೇರಿಕೊಂಡಿದ್ದ ಯಾರೂ ವಾಸಮಾಡದೆ ದಿಬ್ಬವಾಗಿ ಮಾರ್ಪಟ್ಟಿದ್ದ ಶಾಪಗ್ರಸ್ತ ಮನೆಗಳಲ್ಲಿ ವಾಸಮಾಡಿಕೊಂಡಿದ್ದ.


ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು