Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:10
45 ತಿಳಿವುಗಳ ಹೋಲಿಕೆ  

ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.


ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು