ಯೆಶಾಯ 50:11 - ಕನ್ನಡ ಸತ್ಯವೇದವು C.L. Bible (BSI)11 ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ. ಅಧ್ಯಾಯವನ್ನು ನೋಡಿ |