ಯೆಶಾಯ 50:4 - ಕನ್ನಡ ಸತ್ಯವೇದವು C.L. Bible (BSI)4 ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ. ಅಧ್ಯಾಯವನ್ನು ನೋಡಿ |