Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:5 - ಕನ್ನಡ ಸತ್ಯವೇದವು C.L. Bible (BSI)

5 ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:5
13 ತಿಳಿವುಗಳ ಹೋಲಿಕೆ  

ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು.


ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II


ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು