ಯೆಶಾಯ 50:7 - ಕನ್ನಡ ಸತ್ಯವೇದವು C.L. Bible (BSI)7 ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದ್ದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ಅಧ್ಯಾಯವನ್ನು ನೋಡಿ |