Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:9 - ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:9
10 ತಿಳಿವುಗಳ ಹೋಲಿಕೆ  

ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.


ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು