Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:10 - ಕನ್ನಡ ಸತ್ಯವೇದವು C.L. Bible (BSI)

10 ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:10
20 ತಿಳಿವುಗಳ ಹೋಲಿಕೆ  

ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು