ಯೆಶಾಯ 51:13 - ಕನ್ನಡ ಸತ್ಯವೇದವು C.L. Bible (BSI)13 ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ? ಅಧ್ಯಾಯವನ್ನು ನೋಡಿ |
ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.