ಯೆಶಾಯ 51:14 - ಕನ್ನಡ ಸತ್ಯವೇದವು C.L. Bible (BSI)14 ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 [ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ. ಅಧ್ಯಾಯವನ್ನು ನೋಡಿ |