Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:15 - ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ, ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ತೆರೆಗಳು ಬೋರ್ಗರೆಯುವಾಗ, ಸಮುದ್ರವನ್ನು ವಿಭಾಗಿಸಿದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ, ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:15
16 ತಿಳಿವುಗಳ ಹೋಲಿಕೆ  

ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು