Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:16 - ಕನ್ನಡ ಸತ್ಯವೇದವು C.L. Bible (BSI)

16 ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:16
31 ತಿಳಿವುಗಳ ಹೋಲಿಕೆ  

ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ನನ್ನ ಮಹಿಮೆ ನಿನ್ನೆದುರಿಗೆ ದಾಟಿ ಹೋಗುವಾಗ ನಾನು ಆ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ, ನಿನ್ನ ಮುಂದೆ ನಾನು ಹಾದುಹೋಗುವ ತನಕ ನಿನ್ನನ್ನು ನನ್ನ ಕೈಯಿಂದ ಮುಚ್ಚುವೆನು.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು