Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:17 - ಕನ್ನಡ ಸತ್ಯವೇದವು C.L. Bible (BSI)

17 ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:17
30 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.


ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.


ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು