Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:23 - ಕನ್ನಡ ಸತ್ಯವೇದವು C.L. Bible (BSI)

23 ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:23
15 ತಿಳಿವುಗಳ ಹೋಲಿಕೆ  

ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II


ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಉಳುವವರು ಎನ್ನ ಬೆನ್ನನೆ ಉತ್ತಿರುವರು I ಆಳವಾದ ಗಾಯಗೆರೆಗಳನ್ನು ಮಾಡಿಹರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು