ಯೆಶಾಯ 51:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು. ಅಧ್ಯಾಯವನ್ನು ನೋಡಿ |