Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:6 - ಕನ್ನಡ ಸತ್ಯವೇದವು C.L. Bible (BSI)

6 ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:6
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು