Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:7 - ಕನ್ನಡ ಸತ್ಯವೇದವು C.L. Bible (BSI)

7 “ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:7
23 ತಿಳಿವುಗಳ ಹೋಲಿಕೆ  

ಅವನ ಎದೆಯಲ್ಲಿದೆ ದೇವರ ನಿಯಮ I ನೆಲೆತಪ್ಪದು ಅವನ ನಡತೆಯ ಕ್ರಮ II


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.


ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು