Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:9 - ಕನ್ನಡ ಸತ್ಯವೇದವು C.L. Bible (BSI)

9 ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:9
40 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ನೆನಪಿಗೆ ತಂದುಕೊಂಡೆ ಹಳೆಯ ದಿನಗಳನು I ಸ್ಮರಿಸಿಕೊಂಡೆ ಉರುಳಿಹೋದ ವರುಷಗಳನು II


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II


ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು