Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:11 - ಕನ್ನಡ ಸತ್ಯವೇದವು C.L. Bible (BSI)

11 ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:11
37 ತಿಳಿವುಗಳ ಹೋಲಿಕೆ  

ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


“ಬಾಬಿಲೋನ್ ದೇಶದಿಂದ ಓಡಿಹೋಗಿ, ಬಾಬಿಲೋನಿಯರ ಆ ಸೀಮೆಯಿಂದ ಹೊರಡಿ. ಹಿಂಡುಗಳ ಮುಂದೆ ನಡೆಯುವ ಹೋತಗಳಂತೆ ಮುಂತೆರಳಿರಿ.


ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಆರೋನನು ಮತ್ತು ಅವನ ಮಕ್ಕಳು ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


“ನೀನು ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿ ಶುದ್ಧೀಕರಿಸು.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು