Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:12 - ಕನ್ನಡ ಸತ್ಯವೇದವು C.L. Bible (BSI)

12 ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:12
23 ತಿಳಿವುಗಳ ಹೋಲಿಕೆ  

“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.


ಈ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರನು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.


ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು