Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:14 - ಕನ್ನಡ ಸತ್ಯವೇದವು C.L. Bible (BSI)

14 ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:14
21 ತಿಳಿವುಗಳ ಹೋಲಿಕೆ  

ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.


ಕಣ್ಣಿಗೆ ಬಟ್ಟೆ ಕಟ್ಟಿ, “ನಿನ್ನನ್ನು ಹೊಡೆದವರಾರು? ಪ್ರವಾದಿಸು,” ಎಂದು ಕೇಳುತ್ತಿದ್ದರು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.


ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.


ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.


ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II


ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ಜೆರುಸಲೇಮಿಗೆ ಪ್ರಯಾಣಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡುಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು:


ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯ ಆಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು