Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:15 - ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:15
24 ತಿಳಿವುಗಳ ಹೋಲಿಕೆ  

ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ನನ್ನ ಕಡೆಗೆ ಗಮನ ಕೊಡಿ ಬಾಯಿಯ ಮೇಲೆ ಕೈಯಿಟ್ಟು ನಿಬ್ಬೆರಗಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು