Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ : “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕರ್ತನಾದ ಯೆಹೋವನು ಹೀಗಂದುಕೊಳ್ಳುತ್ತಾನೆ - ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ [ಅಲ್ಲಿ ಸೆರೆಯಾದರು]; ಅಶ್ಶೂರ್ಯರು ಹಕ್ಕಿಲ್ಲದೆ ಅವರನ್ನು ಬಾಧೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:4
11 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು.


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು