Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:5 - ಕನ್ನಡ ಸತ್ಯವೇದವು C.L. Bible (BSI)

5 ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:5
27 ತಿಳಿವುಗಳ ಹೋಲಿಕೆ  

ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ನನಗೆ ಗೊತ್ತಿದೆ ನೀ ಕೂರುವುದು ಹೋಗಿಬರುವುದು, ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು,


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು