Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:11 - ಕನ್ನಡ ಸತ್ಯವೇದವು C.L. Bible (BSI)

11 ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:11
37 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು