Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:12 - ಕನ್ನಡ ಸತ್ಯವೇದವು C.L. Bible (BSI)

12 ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:12
38 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


(ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು).


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು