ಯೆಶಾಯ 53:2 - ಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ. ಅಧ್ಯಾಯವನ್ನು ನೋಡಿ |