Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:11 - ಕನ್ನಡ ಸತ್ಯವೇದವು C.L. Bible (BSI)

11 “ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:11
43 ತಿಳಿವುಗಳ ಹೋಲಿಕೆ  

‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.


ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.


ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.


ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.


ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು