Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:15 - ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿವಿುತ್ತ ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:15
16 ತಿಳಿವುಗಳ ಹೋಲಿಕೆ  

ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು