Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:5
30 ತಿಳಿವುಗಳ ಹೋಲಿಕೆ  

ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.


ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು