Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:6 - ಕನ್ನಡ ಸತ್ಯವೇದವು C.L. Bible (BSI)

6 ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಬಿಡಲ್ಪಟ್ಟು ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ ಎಂಬದು ನಿನ್ನ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:6
13 ತಿಳಿವುಗಳ ಹೋಲಿಕೆ  

“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ನಿನ್ನ ಬುಗ್ಗೆ ದೇವರಿಂದ ಆಶೀರ್ವಾದಹೊಂದಲಿ, ನಿನ್ನ ಆನಂದ ನಿನ್ನ ಯೌವನಕಾಲದ ಹೆಂಡತಿಯಲ್ಲಿರಲಿ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು