Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:7 - ಕನ್ನಡ ಸತ್ಯವೇದವು C.L. Bible (BSI)

7 “ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:7
34 ತಿಳಿವುಗಳ ಹೋಲಿಕೆ  

ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು‍ ಒಂದಾಗಿ ಸೇರಿಸುವೆನು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.


ನಾನಾದರೋ ಉಲ್ಲಾಸದಿಂದಿರುವಾಗಲೂ I ನನ್ನನು ಅಲ್ಲಾಡಿಸಲಾಗದೆಂದೆ ಯಾರಿಂದಲೂ II


ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು