Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:8 - ಕನ್ನಡ ಸತ್ಯವೇದವು C.L. Bible (BSI)

8 ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:8
34 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು