Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:2 - ಕನ್ನಡ ಸತ್ಯವೇದವು C.L. Bible (BSI)

2 ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:2
42 ತಿಳಿವುಗಳ ಹೋಲಿಕೆ  

“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ.


ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


“ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


“ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು