Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:3 - ಕನ್ನಡ ಸತ್ಯವೇದವು C.L. Bible (BSI)

3 ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:3
45 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II


ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.


ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”


ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು