Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:9 - ಕನ್ನಡ ಸತ್ಯವೇದವು C.L. Bible (BSI)

9 “ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:9
9 ತಿಳಿವುಗಳ ಹೋಲಿಕೆ  

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು