Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:1
26 ತಿಳಿವುಗಳ ಹೋಲಿಕೆ  

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು