Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:4 - ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಹೀಗನ್ನುತ್ತಾನೆ - ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದದ್ದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ನಪುಂಸಕರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:4
12 ತಿಳಿವುಗಳ ಹೋಲಿಕೆ  

ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು