Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರುವಾಸಿಯನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತ ನಾಮವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:5
23 ತಿಳಿವುಗಳ ಹೋಲಿಕೆ  

ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು