Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:7 - ಕನ್ನಡ ಸತ್ಯವೇದವು C.L. Bible (BSI)

7 ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:7
35 ತಿಳಿವುಗಳ ಹೋಲಿಕೆ  

“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.


ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು