Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:9 - ಕನ್ನಡ ಸತ್ಯವೇದವು C.L. Bible (BSI)

9 “ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವದಕ್ಕೆ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:9
9 ತಿಳಿವುಗಳ ಹೋಲಿಕೆ  

ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.


ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು