Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:1 - ಕನ್ನಡ ಸತ್ಯವೇದವು C.L. Bible (BSI)

1 ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:1
17 ತಿಳಿವುಗಳ ಹೋಲಿಕೆ  

ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು.


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು