Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:13 - ಕನ್ನಡ ಸತ್ಯವೇದವು C.L. Bible (BSI)

13 ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:13
39 ತಿಳಿವುಗಳ ಹೋಲಿಕೆ  

ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.


“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು !


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು