Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:15 - ಕನ್ನಡ ಸತ್ಯವೇದವು C.L. Bible (BSI)

15 “ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:15
72 ತಿಳಿವುಗಳ ಹೋಲಿಕೆ  

ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಯುಗಯುಗಾಂತರಕ್ಕೂ ರಾಜ್ಯವಾಳುವವನು ಸರ್ವೇಶ್ವರನೇ!


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು