Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:16
21 ತಿಳಿವುಗಳ ಹೋಲಿಕೆ  

ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು