Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:17
29 ತಿಳಿವುಗಳ ಹೋಲಿಕೆ  

ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು