Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:18 - ಕನ್ನಡ ಸತ್ಯವೇದವು C.L. Bible (BSI)

18 “ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:18
32 ತಿಳಿವುಗಳ ಹೋಲಿಕೆ  

ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು