Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:13 - ಕನ್ನಡ ಸತ್ಯವೇದವು C.L. Bible (BSI)

13 “ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:13
20 ತಿಳಿವುಗಳ ಹೋಲಿಕೆ  

ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ನೀವು ವಾಸಿಸುವ ಯಾವ ಮನೆಯಲ್ಲೇ ಆಗಲಿ, ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.


“ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು