Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:14 - ಕನ್ನಡ ಸತ್ಯವೇದವು C.L. Bible (BSI)

14 ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ, ಮತ್ತು ನಾನು ನಿಮ್ಮನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ನಿಮ್ಮ ಪಿತೃವಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:14
23 ತಿಳಿವುಗಳ ಹೋಲಿಕೆ  

ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅವರ ನಾಡನ್ನು ಇಸ್ರಯೇಲರಿಗೆ ಕೊಟ್ಟಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಕೊಟ್ಟನು ಅವರ ನಾಡನು ಇಸ್ರಯೇಲರಿಗೆ I ಅದು ಸ್ವಂತ ಸೊತ್ತಾಯಿತು ಆತನಾ ಪ್ರಜೆಗೆ II


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು