Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:2 - ಕನ್ನಡ ಸತ್ಯವೇದವು C.L. Bible (BSI)

2 ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:2
32 ತಿಳಿವುಗಳ ಹೋಲಿಕೆ  

ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II


ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು